ವಿದೇಶ

ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ… ಬಾಂಗ್ಲಾದೇಶದ ಗಂಭೀರ ಆರೋಪ

ಬಾಂಗ್ಲಾದೇಶದಲ್ಲಿರುವ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದೌರ್ಜನ್ಯ ನಡೆಸುತ್ತಿರುವ ಬಾಂಗ್ಲಾದೇಶ ಸರ್ಕಾರ ಈಗ ಭಾರತದ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಭಾರತದಲ್ಲಿರುವ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ತಿಳಿಸಿದೆ.

ಢಾಕಾ: ಬಾಂಗ್ಲಾದೇಶದಲ್ಲಿರುವ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದೌರ್ಜನ್ಯ ನಡೆಸುತ್ತಿರುವ ಬಾಂಗ್ಲಾದೇಶ ಸರ್ಕಾರ ಈಗ ಭಾರತದ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಭಾರತದಲ್ಲಿರುವ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ತಿಳಿಸಿದೆ.

ಅಲ್ಪಸಂಖ್ಯಾತ ಸಮುದಾಯಗಳ ರಕ್ಷಣೆಯಲ್ಲಿ ಭಾರತಎರಡು ರೀತಿಯ ಮಾನದಂಡಗಳನ್ನು ಅನುಸರಿಸುತ್ತಿದೆ. ಭಾರತದಲ್ಲಿ, ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ಮೇಲೆ ಹಲವಾರು ಕ್ರೂರ ಘಟನೆಗಳು ನಡೆಯುತ್ತಿವೆ. ಆದರೆ ಅವರು ಯಾವುದೇ ಪಶ್ಚಾತ್ತಾಪ ಅಥವಾ ಮುಜುಗರವನ್ನು ಆದರ ಕುರಿತು ಹೊಂದಿಲ್ಲ. ಭಾರತದ ದ್ವಂದ್ವ ನೀತಿಯು ಖಂಡನೀಯ ಮತ್ತು ಆಕ್ಷೇಪಾರ್ಹವಾಗಿದೆ ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಕಾನೂನು ವ್ಯವಹಾರಗಳ ಸಲಹೆಗಾರ ಆಸಿಫ್ ನಜ್ರುಲ್ ಆರೋಪಿಸಿದಾರೆ.

ಹೆಚ್ಚಿನ ಬಾಂಗ್ಲಾದೇಶಿಗಳು (64.1%) ಮಧ್ಯಂತರ ಸರ್ಕಾರವು ಹಿಂದಿನ ಅವಾಮಿ ಲೀಗ್ ಸರ್ಕಾರಕ್ಕೆ ಹೋಲಿಸಿದರೆ ದೇಶದ ಅಲ್ಪಸಂಖ್ಯಾತ ಸಮುದಾಯಗಳಿಗೆ ಉತ್ತಮ ಭದ್ರತೆಯನ್ನು ನೀಡಲು ಸಮರ್ಥವಾಗಿದೆ ಎಂದು ನಂಬುತ್ತಾರೆ ಎಂದು ತಿಳಿಸುವ ಮೂಲಕ ಬಾಂಗ್ಲಾದಲ್ಲಿರುವ ಹಿಂದೂಗಳಿಗೆ ಸೂಕ್ತ ಭದ್ರತೆ ಒದಗಿಸುತ್ತೇವೆ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ.