ದೇಶ

ಬಾಂಗ್ಲಾದೇಶ! ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಮತ್ತೆ ಸಂಕಷ್ಟ: ಬಂಧನ ವಾರೆಂಟ್ ಜಾರಿ!

ಶೇಖ್ ಹಸೀನಾ ಅವರು ನವೆಂಬರ್ 18ರಂದು ನ್ಯಾಯಾಲಯಕ್ಕೆ ಹಾಜರಾಗಬೇಕು. ಹಸೀನಾ ನೇತೃತ್ವದ ಅವಾಮಿ ಲೀಗ್ ಸರ್ಕಾರದ ಪತನದ ನಂತರ ದೇಶಾದ್ಯಂತ ಭುಗಿಲೆದ್ದ ಹಿಂಸಾಚಾರದ ಘಟನೆಗಳಲ್ಲಿ 230 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.

ಬಾಂಗ್ಲಾದೇಶ ನ್ಯಾಯಾಲಯವು ಶೇಖ್ ಹಸೀನಾ ವಿರುದ್ಧ ಅಕ್ಟೋಬರ್ 17 ಗುರುವಾರ ಬಂಧನ ವಾರಂಟ್ ನ್ನ ಹೊರಡಿಸಿದೆ. ಶೇಖ್ ಹಸೀನಾ ಅವರು ಆಗಸ್ಟ್ 5 ರಂದು ದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ತಮ್ಮ ಸಹೋದರಿ ಶೇಖ್ ರೆಹಾನಾ ಅವರೊಂದಿಗೆ ಬಾಂಗ್ಲಾದೇಶವನ್ನು ತೊರೆದು ಭಾರತಕ್ಕೆ ಬಂದಿದ್ದರು. ಈ ಹಿಂದೆ ಶೇಖ್ ಹಸೀನಾ ಅವರು ಲಂಡನ್‌ ಗೆ ತೆರಳುವ ಯೋಜನೆ ಹಾಕಿಕೊಂಡಿದ್ದರು, ಆದರೆ ಬ್ರಿಟಿಷ್ ಸರ್ಕಾರದಿಂದ ಗ್ರೀನ್ ಸಿಗ್ನಲ್ ನೀಡಲಿಲ್ಲ,  ಈ ಸಂಬಂಧ ಶೇಖ್ ಹಸೀನಾ ತನ್ನ ಸಹೋದರಿಯೊಂದಿಗೆ ಭಾರತದಲ್ಲಿಯೇ ನೆಲೆಸಿದ್ದಾರೆ.

Sheikh Hasina resigns as Bangladesh Prime Minister, flees to India amid  protests

ಇದರ ಜೋತೆ ಶೀಖ್ ಹಸೀನಾ ಅವರಿಗೆ ಮತ್ತೊಂದು ಆದೇಶದ  ನೀಡಿದ್ದು, ಇದರ ಪ್ರಕಾರ ಶೇಖ್ ಹಸೀನಾ ಅವರು ನವೆಂಬರ್ 18ರಂದು ನ್ಯಾಯಾಲಯಕ್ಕೆ ಹಾಜರಾಗಬೇಕು. ಹಸೀನಾ ನೇತೃತ್ವದ ಅವಾಮಿ ಲೀಗ್ ಸರ್ಕಾರದ ಪತನದ ನಂತರ ದೇಶಾದ್ಯಂತ ಭುಗಿಲೆದ್ದ ಹಿಂಸಾಚಾರದ ಘಟನೆಗಳಲ್ಲಿ 230 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಬಾಂಗ್ಲಾದೇಶದ ನ್ಯಾಯಾಲಯವು ಶೇಖ್ ಹಸೀನಾ ವಿರುದ್ಧ ಅಕ್ಟೋಬರ್ 17 ಗುರುವಾರ ಬಂಧನ ವಾರಂಟ್ ಹೊರಡಿಸಿದೆ. ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಕ್ರಿಮಿನಲ್ ಟ್ರಿಬ್ಯೂನಲ್‌ ನ ಮುಖ್ಯ ಪ್ರಾಸಿಕ್ಯೂಟರ್ ಮೊಹಮ್ಮದ್ ತಾಜುಲ್ ಇಸ್ಲಾಂ ಈ ಬಂಧನ ವಾರಂಟ್ ಕುರಿತು ಮಾಹಿತಿ ನೀಡಿದರು. ಹಸೀನಾ ಜೊತೆ ಬಾಂಗ್ಲಾದೇಶ ಬಿಟ್ಟು ಓಡಿ ಹೋದ ಎಲ್ಲರನ್ನೂ ಕರೆಸಿಕೊಳ್ಳುತ್ತೇವೆ ಎಂದಿದ್ದಾರೆ ಇದೇ ವಕೀಲ ಮೊಹಮ್ಮದ್‌ ತಾಜುಲ್‌ ಇಸ್ಲಾಂ. ಹೀಗಾಗಿ ತಿಕ್ಕಾಟ ಕೂಡ ಜೋರಾಗಿದೆ.