ಬೆಳಗಾವಿ: ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ ರುದ್ರೇಶ್ ಯಾದವಣ್ಣನವರ್ (35) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ರು. ಈ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದ ಎ1 ಆರೋಪಿ ತಹಶೀಲ್ದಾರ್ ಬಸವರಾಜ ನಾಗರಾಳ ಇಂದು ದಿಢೀರ್ನೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಎ1 ಆರೋಪಿ ಬಸವರಾಜ ನಾಗರಾಳಗೆ ಜಾಮೀನು ಮಂಜೂರಾಗ್ತಿದ್ದಂತೆ ಕಚೇರಿಗೆ ಆಗಮಿಸಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಹತ್ತು ದಿನದಿಂದ ನಾಪತ್ತೆಯಾಗಿದ್ದ ತಹಶೀಲ್ದಾರ್ ಬಸವರಾಜ ಇಂದು ದಿಢೀರ್ ಪ್ರತ್ಯಕ್ಷರಾಗಿದ್ದಾರೆ. ನ.5ರಂದು ತಹಶೀಲ್ದಾರ್ ಕಚೇರಿಯಲ್ಲೇ ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿದ್ದ. ಅದೇ ಕೊಠಡಿಯಲ್ಲೇ ಬಸವರಾಜ ನಾಗರಾಳ ಕರ್ತವ್ಯ ನಿರ್ವಹಣೆ ಮಾಡ್ತಿದ್ದಾರೆ.