ಕರ್ನಾಟಕ

ಬೆಳಗಾವಿ ಅಧಿವೇಶನ : ವಾರದಲ್ಲಿ ಎರಡು ದಿನ ಕಿತ್ತೂರು-ಕಲ್ಯಾಣ ಕರ್ನಾಟಕದ ಬಗ್ಗೆ ಚರ್ಚೆ : ಬಸವರಾಜ ಹೊರಟ್ಟಿ

ಬೆಳಗಾವಿಯಲ್ಲಿ ಡಿಸೆಂಬರ್ 9 ರಿಂದ ಅಧಿವೇಶನ ನಡೆಯಲಿದೆ. ಅಂದ್ರೆ ನಾಳೆ ಅಧಿವೇಶನ ಶುರುವಾಗಲಿದೆ.

ಬೆಳಗಾವಿ : ಬೆಳಗಾವಿಯಲ್ಲಿ ಡಿಸೆಂಬರ್ 9 ರಿಂದ ಅಧಿವೇಶನ ನಡೆಯಲಿದೆ. ಅಂದ್ರೆ ನಾಳೆ ಅಧಿವೇಶನ ಶುರುವಾಗಲಿದೆ. ಈ ಹಿನ್ನಲೆ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಸುವರ್ಣ ವಿಧಾನಸೌಧಕ್ಕೆ ಆಗಮಿಸಿದ್ದು, ಅಲ್ಲಿನ ಅಧಿವೇಶನದ ವ್ಯವಸ್ಥೆ ಪರಿಶೀಲಿಸಿದ್ರು. 

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾರದಲ್ಲಿ 2 ದಿನ ಕಿತ್ತೂರು-ಕಲ್ಯಾಣ ಪ್ರಾಂತ್ಯ ಅಭಿವೃದ್ಧಿ ಕುರಿತ ಚರ್ಚೆಗೆ ಆದ್ಯತೆ ನೀಡಲಾಗಿದೆ.40ಕ್ಕೂ ಹೆಚ್ಚು ಸದಸ್ಯರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಲಾಗಿದ್ದು, ಚಳಿಗಾಲದ ಅಧಿವೇಶನದಲ್ಲಿ ರಚನಾತ್ಮಕ ಕಲಾಪ ನಡೆಸುವಂತೆ ಪರಿಷತ್ ಸದಸ್ಯರಿಗೆ ಸೂಚಿಸಿದ್ದೇನೆ. ಡಿಸೆಂಬರ್ 9 ರಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಯಲಿದೆ. ಇಡೀ ಕಿತ್ತೂರು ಕಲ್ಯಾಣ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಯೋಚಿಸಲು ಮತ್ತು ಚರ್ಚಿಸಲು ಸದಸ್ಯರಿಗೆ ಸೂಚಿಸಲಾಗಿದೆ ಎಂದು ಹೇಳಿದರು. 

ನಾನು ಸಿದ್ಧಪಡಿಸಿದ ಕೃಷ್ಣಾ ಮೇಲ್ದಂಡೆ ಯೋಜನೆ, ಮಹದಾಯಿ–ಕಳಸಾ ಬಂಡೂರಿ ಯೋಜನೆ ಅನುಷ್ಠಾನ, ಅರಣ್ಯಭೂಮಿ ಅತಿಕ್ರಮಣದಾರರು ಮತ್ತು ಸಂತ್ರಸ್ತರ ಸಮಸ್ಯೆ, ಕಬ್ಬು ಬೆಳೆಗಾರರ ಸಮಸ್ಯೆಗಳು, ಶೈಕ್ಷಣಿಕ ಸಂಕಷ್ಟಗಳು ಮತ್ತಿತರ ವಿಷಯಗಳ ಕುರಿತ ಚರ್ಚೆಗೆ ಒತ್ತು ನೀಡಿದ್ದೇನೆ ಎಂದು ತಿಳಿಸಿದರು.