ಕರ್ನಾಟಕ

ಬೆಂಗಳೂರಿನಲ್ಲಿ ಮುಂದುವರೆದ ಮಳೆಯಾರ್ಭಟ; ಯಲಹಂಕದಲ್ಲಿ ಸರಣಿ ಅಪಘಾತ

ಸರಣಿ ಅಪಘಾತದಲ್ಲಿ 7 ಕಾರುಗಳು ಜಕಂಗೊಂಡಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಕಾರಿನಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಹಲವು ಅವಾಂತರಗಳು ಸೃಷ್ಟಿಯಾಗಿದ್ದು, ಯಲಹಂಕದಲ್ಲಿ ಸರಣಿ ಅಪಘಾತ ಸಂಭವಿಸಿದೆ. ಯಲಹಂಕ ಮೇಲ್ಸೇತುವೆ ಮೇಲೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 7 ಕಾರುಗಳು ಅಪಘಾತಕ್ಕೀಡಾಗಿವೆ.

ಸರಣಿ ಅಪಘಾತದಲ್ಲಿ 7 ಕಾರುಗಳು ಜಕಂಗೊಂಡಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಕಾರಿನಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. 

ಯಲಹಂಕಕ್ಕೆ ತೆರಳುವ ಮುಖ್ಯರಸ್ತೆಯಲ್ಲೇ ಅವಘಡ ಸಂಭವಿಸಿದ್ದು, ಕೆಲಕಾಲ ಟ್ರಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಟ ನಡೆಸಿದ್ದಾರೆ.