ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವಕ್ಕೆ ದಿನಾಂಕ ನಿಗದಿಯಾಗಿದ್ದು, ಏಪ್ರಿಲ್ 4ರಿಂದ ಏಪ್ರಿಲ್ 14ರವರೆಗೆ ಉತ್ಸವ ನಡೆಯಲಿದೆ ಎನ್ನಲಾಗುತ್ತಿದೆ. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಒಟ್ಟು 11 ದಿನಗಳ ಕಾಲ ಬೆಂಗಳೂರು ಕರಗ ಮಹೋತ್ಸವ ನಡೆಯಲಿದ್ದು, ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ.
ನಿನ್ನೆ ( ಸೋಮವಾರ) ಕರಗ ಸಂಬಂಧ ಸಭೆ ನಡೆದಿದ್ದು, ಸಭೆಯಲ್ಲಿ ಕರಗ ಹೊರಲಿರುವ ಎ.ಜ್ಞಾನೇಂದ್ರ ಒಮ್ಮತದಿಂದ ಆಯ್ಕೆಯಾಗಿದ್ದಾರೆ. ಕಳೆದ 14 ವರ್ಷಗಳ ಕಾಲ ಕರಗ ಹೊತ್ತ ಇವರು, ಈ ಬಾರಿ ಹೊರುವ ಕರಗ ಉತ್ಸವ ಕೊನೆಯದು ಎನ್ನಲಾಗಿದೆ.