ರಾಮಮಂದಿರ ಪ್ರತಿಷ್ಠಾಪನೆಯ ದಿನ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.. ಭಾರತಕ್ಕೆ ಸ್ವಾತಂತ್ರ್ಯವಿತ್ತು ಆದರೆ ಅದನ್ನು ಸ್ಥಾಪಿಸಲಾಗಿರಲಿಲ್ಲ, ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾದ ದಿನವನ್ನು ‘ಪ್ರತಿಷ್ಠಾ ದ್ವಾದಶಿ’ ಎಂದು ಆಚರಿಸಿ ಭಾರತದ ನೈಜ ಸ್ವಾತಂತ್ರ್ಯವೆಂದು ಘೋಷಿಸಬೇಕೆಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಒತ್ತಾಯಿಸಿದ್ದಾರೆ.. ಮಧ್ಯಪ್ರದೇಶದ ಇಂದೋರ್‌ನಲ್ಲಿ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರಿಗೆ ‘ ರಾಷ್ಟ್ರೀಯ ದೇವಿ ಅಹಲ್ಯಾ ಪ್ರಶಸ್ತಿ’ ಪ್ರದಾನದ ಬಳಿಕ ಮಾತನಾಡಿದ ಮೋಹನ್ ಭಾಗವತ್, ಹಲವಾರು ಶತಮಾನಗಳವರೆಗೆ ಶತ್ರುದಾಳಿ ಎದುರಿಸಿದ ಭಾರತಕ್ಕೆ ರಾಮಮಂದಿರ ಉದ್ಘಾಟನೆ ನಂತರ ನಿಜವಾದ ಸ್ವಾತಂತ್ರ್ಯ ದೊರೆಯಿತು.. ರಾಮ ಮಂದಿರ ಆಂದೋಲನದಿಂದ ಭಾರತವನ್ನು ಜಾಗೃತಗೊಳಿಸಲು ನೆರವಾಯಿತು ಎಂದಿದ್ದಾರೆ..
ಜನವರಿ 22, 2024ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಯೋಧ್ಯೆಯ ದೇವಾಲಯದಲ್ಲಿ ರಾಮಲಲ್ಲಾ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿತ್ತು..