ಇತ್ತೀಚೆಗೆ ಶಿವಶಿವ ಶಂಕರ" ಹಾಡು ಬಿಡುಗಡೆಯಾಯಿತು. ಆರ್ಟ್ ಆಫ್ ಲಿವಿಂಗ್ ನ ಶ್ರೀ ರವಿಶಂಕರ್ ಗುರೂಜಿ ಈ ಹಾಡನ್ನು ಬಿಡುಗಡೆ ಮಾಡಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ಮೋಹನ್ ಬಾಬು, ವಿಷ್ಣು ಮಂಚು, ನಿರ್ದೇಶಕ ಮುಖೇಶ್ ಕುಮಾರ್ ಸಿಂಗ್ ಮುಂತಾದ ಚಿತ್ರತಂಡದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶ್ರೀಮತಿ ಭಾರತಿ ವಿಷ್ಣುವರ್ಧನ್, ಶ್ರೀಮತಿ ಸುಮಲತ ಅಂಬರೀಶ್ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅತಿಥಿಗಳಾಗಿ ಆಗಮಿಸಿದ್ದರು.

ನನಗೆ "ಕಣ್ಣಪ್ಪ ಅಂದಕೂಡಲೆ ನೆನಪಿಗೆ ಬರುವುದು ಡಾ||ರಾಜಕುಮಾರ್ ಅವರು ಎಂದು ಮಾತು ಆರಂಭಿಸಿದ ನಟ, ನಿರ್ಮಾಪಕ ಮೋಹನ್ ಬಾಬು,, ನನ್ನ ಆತ್ಮೀಯ ಗೆಳೆಯರಾದ ವಿಷ್ಣುವರ್ಧನ್ ಹಾಗು ಅಂಬರೀಶ್ ಅವರ ಪತ್ನಿಯರಾದ ಭಾರತಿ ವಿಷ್ಣುವರ್ಧನ್ ಹಾಗೂ ಸುಮಲತ ಅಂಬರೀಶ್ ಅವರು ಬಂದಿರುವುದು ಬಹಳ ಖುಷಿಯಾಗಿದೆ. ರಾಕ್ ಲೈನ್ ವೆಂಕಟೇಶ್ ಅವರು ಕರ್ನಾಟಕದಲ್ಲಿ "ಕಣ್ಣಪ್ಪ" ಚಿತ್ರದ ವಿತರಣೆ ಹಕ್ಕನ್ನು ಪಡೆದುಕೊಂಡಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

ನಮ್ಮ ಯಜಮಾನರಿಗೆ ಮೋಹನ್ ಬಾಬು ಎಂದರೆ ಬಹಳ ಪ್ರೀತಿ. ಅವರಿಗೂ ನಮ್ಮ ಯಜಮಾನರೆಂದರೆ ಅಷ್ಟೇ ಪ್ರೀತಿ. ಹಾಗಾಗಿ ಮೋಹನ್ ಬಾಬು, ಅವರ ಮಗನಿಗೆ ನಮ್ಮ ಯಜಮಾನರ ಹೆಸರನ್ನೇ ಇಟ್ಟಿದ್ದಾರೆ ಎಂದರು ನಟಿ ಭಾರತಿ ವಿಷ್ಣುವರ್ಧನ್.

ಅಂಬರೀಶ್ ಅವರಿಗೆ ಮೋಹನ್ ಬಾಬು ಬಹಳ ಆತ್ಮೀಯರು. ಅವರ ಮಗ ವಿಷ್ಣು ಅವರನ್ನು ಸಹ ನಾವು ಚಿಕ್ಕವಯಸ್ಸಿನಿಂದ ನೋಡಿಕೊಂಡು ಬಂದಿದ್ದೇವೆ."ಕಣ್ಣಪ್ಪ" ಚಿತ್ರದ ಹಾಡನ್ನು ನೋಡಿ ಬಹಳ ಖುಷಿಯಾಯಿತು. ಚಿತ್ರ ಯಶಸ್ವಿಯಾಗಲೆಂದು ಸುಮಲತ ಅಂಬರೀಶ್ ಹಾರೈಸಿದರು. ನಿರ್ದೇಶಕ ಮುಖೇಶ್ ಕುಮಾರ್ ಸಿಂಗ್, ಹಾಡು ಬರೆದಿದ್ದು, ಹೆಸಾರಾಂತ ಗಾಯಕ ವಿಜಯ್ ಪ್ರಕಾಶ್ ಈ ಹಾಡನ್ನು ಹಾಡಿದ್ದಾರೆ.ಏಪ್ರಿಲ್ 25ರಂದು ಸಿನಿಮಾ ಬಿಡುಗಡೆಯಾಗಲಿದೆ.