ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಹಾಗೂ ಅವರ ಗನ್ ಮ್ಯಾನ್‌ರನ್ನ ಪೊಲೀಸರು ಬಂಧಿಸಿದ್ದಾರೆ. ಕೊಡಿಗೆಹಳ್ಳಿಯಲ್ಲಿ ಅಣ್ಣಮ್ಮ ದೇವಿ ಉತ್ಸವ ವಿಚಾರದಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಲಾಯರ್ ಜಗದೀಶ್ ಅವರನ್ನ ಬಂಧಿಸಲಾಗಿದೆ.
ಅಣ್ಣಮ್ಮ ದೇವಿ ಉತ್ಸವದ ವಿಷಯವಾಗಿ ಸ್ಥಳೀಯರು ಮತ್ತು ಲಾಯರ್ ಜಗದೀಶ್ ನಡುವೆ ಕಿರಿಕ್ ನಡೆದಿದೆ. ಇದರಿಂದ ಆಕ್ರೋಶಗೊಂಡ ಸ್ಥಳಿಯರು ಜಗದೀಶ್ ಮನೆಗೆ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಜಗದೀಶ್ ಹಾಗೂ ಅವರ ಗನ್ ಮ್ಯಾನ್ ಮೇಲೆ ಹಲ್ಲೆ ನಡೆಸಲಾಗಿದೆ. ಆತ್ಮ ರಕ್ಷಣೆಗಾಗಿ ಜಗದೀಶ್ ಅವರ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿದ್ದರು.
ಈ ಸಂಬಂಧ ತೇಜಸ್ ಎಂಬುವರು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಲಾಯರ್ ಜಗದೀಶ್ರನ್ನು ಬಂಧಿಸಿದ್ದಾರೆ.
ಇನ್ನೂ ಗಲಾಟೆಯಲ್ಲಿ ಲಾಯರ್ ಜಗದೀಶ್ ಅವರು ಗಾಯಗೊಂಡಿದ್ದು, ಚಿಕಿತ್ಸೆಯನ್ನ ಕೂಡ ಪಡೆದಿದ್ದಾರೆ.