ದೇಶ

ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಗೆಲುವು; 26/11 ಅಪರಾಧಿಯನ್ನ ಹಸ್ತಾಂತರಿಸಲು US ನ್ಯಾಯಾಲಯ ಸಮ್ಮತಿ

2008 ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಆರು ಅಮೆರಿಕನ್ನರು ಸೇರಿದಂತೆ ಒಟ್ಟು 166 ಜನರು ಸಾವನ್ನಪ್ಪಿದರು, ಇದರಲ್ಲಿ 10 ಪಾಕಿಸ್ತಾನಿ ಭಯೋತ್ಪಾದಕರು 60 ಗಂಟೆಗಳಿಗೂ ಹೆಚ್ಚು ಕಾಲ ಮುತ್ತಿಗೆ ಹಾಕಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ದಾಳಿ ಮಾಡಿ ಅಮಾಯಕರನ್ನ ಬಲಿ ಪಡೆದಿದ್ದರು.

ವಾಷಿಂಗ್ಟನ್: 2008ರ ಮುಂಬೈ ದಾಳಿ ಪ್ರಕರಣದ ಅಪರಾಧಿ ತಹವ್ವುರ್ ರಾಣಾ ಅವರನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಸುಪ್ರೀಂ ಕೋರ್ಟ್ ಸಮ್ಮತಿ ನೀಡಿದ್ದು, ಈ ಮೂಲಕ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಗೆಲುವು ಸಿಕ್ಕಂತಾಗಿದೆ.

2008ರಲ್ಲಿ ಮುಂಬೈನ ತಾಜ್‌ ಹೊಟೇಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಪಾಕಿಸ್ತಾನಿ ಮೂಲದ ಕೆನಡಾದ ಪ್ರಜೆ ರಾಣಾ ಪ್ರಮುಖ ಆರೋಪಿಯಾಗಿದ್ದ. ಆತನನ್ನ ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ನ್ಯಾಯಾಲಯಕ್ಕೆ ಕೋರಲಾಗಿತ್ತು. ಭಾರತಕ್ಕೆ ಗಡೀಪಾರು ಮಾಡದಿರಲು ರಾಣಾನಿಗೆ ಇದ್ದ ಕೊನೆಯ ಕಾನೂನು ಅವಕಾಶ ಕೈತಪ್ಪಿದ್ದು, ಭಾರತಕ್ಕೆ ಭಾರತಕ್ಕೆ  ರಾಣಾನನ್ನ ಹಸ್ತಾಂತರಿಸಲು ಅಮೆರಿಕ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

2008 ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಆರು ಅಮೆರಿಕನ್ನರು ಸೇರಿದಂತೆ ಒಟ್ಟು 166 ಜನರು ಸಾವನ್ನಪ್ಪಿದರು, ಇದರಲ್ಲಿ 10 ಪಾಕಿಸ್ತಾನಿ ಭಯೋತ್ಪಾದಕರು 60 ಗಂಟೆಗಳಿಗೂ ಹೆಚ್ಚು ಕಾಲ ಮುತ್ತಿಗೆ ಹಾಕಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ದಾಳಿ ಮಾಡಿ ಅಮಾಯಕರನ್ನ ಬಲಿ ಪಡೆದಿದ್ದರು.  

64 ವರ್ಷದ ರಾಣಾ ಅವರನ್ನು ಪ್ರಸ್ತುತ ಲಾಸ್ ಏಂಜಲೀಸ್‌ನ ಮೆಟ್ರೋಪಾಲಿಟನ್ ಡಿಟೆನ್ಶನ್ ಸೆಂಟರ್‌ನಲ್ಲಿ ಬಂಧಿಸಲಾಗಿದೆ. ರಾಣಾ 26/11 ಮುಂಬೈ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬನಾದ ಪಾಕಿಸ್ತಾನಿ-ಅಮೆರಿಕನ್ ಭಯೋತ್ಪಾದಕ ಡೇವಿಡ್ ಕೋಲ್ಮನ್ ಹೆಡ್ಲಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ತಿಳಿದುಬಂದಿದ್ದು, ಆತನನ್ನ ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ನ್ಯಾಯಾಲಯ ಸಮ್ಮತಿ ನೀಡಿದೆ.