ವೈರಲ್

ಬಿಜೆಪಿ ಶಾಸಕ ಮುನಿರತ್ನ ಬಂಧನ; ಕಾರಣವೇನು? ಕೋಲಾರದ ನಂಗಲಿ ಗ್ರಾಮದ ಬಳಿ ಅರೆಸ್ಟ್..!

ರಾಜರಾಜೇಶ್ವರಿನಗರ ಬಿಜೆಪಿ ಶಾಸಕ ಮುನಿರತ್ನ ಬಂಧನ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ FIR ದಾಖಲಾಗಿತ್ತು.

ತ್ಯಾಜ್ಯ ವಿಲೇವಾರಿ ಗುತ್ತಿಗೆ ವಿಚಾರವಾಗಿ ಗುತ್ತಿಗೆದಾರ ಚಲುವರಾಜುಗೆ ಶಾಸಕ ಮುನಿರತ್ನ ಅವಾಚ್ಯವಾಗಿ ನಿಂದಿಸಿರೋದು ಆಡಿಯೋದಲ್ಲಿ ಬಯಲಾಗಿತ್ತು. ಶಾಸಕ ಮುನಿರತ್ನ ವಿರುದ್ಧ ಬೆಂಗಳೂರಿನ ವೈಯಾಲಿಕಾವಲ್ ಠಾಣೆಯಲ್ಲಿ 2 ಎಫ್ಐಆರ್ ಕೂಡ ದಾಖಲಾಗಿದತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಪ್ರತಿಕ್ರಿಯಿಸಿದ್ದು, ಆಡಿಯೋ ನನ್ನದೇ ಎಂದು ಸಾಬೀತಾದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ರು.ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಈಗ ಬಂಧಿಸಿದ್ದಾರೆ.