ತುಮಕೂರು; ತುಮಕೂರು ಜಿಲ್ಲಾ ಬಿಜೆಪಿ ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆದಿದೆ. ಸರಣಿ ಬಾಣಂತಿಯರ ಸಾವು, ಬಸ್ ದರ ಏರಿಕೆ ಸೇರಿದಂತೆ ಬೆಲೆ ಏರಿಕೆಯ ಹಲವು ವಿಚಾರಗಳನ್ನು ಮುಂದಿಟ್ಟು, ಬಿಜೆಪಿ ಕಾರ್ಯಕತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ ವೈಫಲ್ಯಗಳನ್ನು ಭಿತ್ತಿ ಚಿತ್ರ ಹಿಡಿದು ಮಹಿಳಾ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ತುಮಕೂರು ನಗರ ಶಾಸಕ ಜ್ಯೋತಿಗಣೇಶ್ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆಯಲ್ಲಿ ನೂರಾರು ಮಂದಿ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.