ಕರ್ನಾಟಕ

ಪ್ರಿನ್ಸಸ್‌ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಬಿಜೆಪಿ ಪ್ರೊಟೆಸ್ಟ್..!

ಪ್ರಿನ್ಸಸ್‌ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರದ ಬಗ್ಗೆ ಬಿಜೆಪಿ ಕಾಂಗ್ರೆಸ್‌ ನಡುವೆ ಜಟಾಪಟಿ ಶುರುವಾಗಿದೆ.

ಪ್ರಿನ್ಸಸ್‌ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರದ ಬಗ್ಗೆ ಬಿಜೆಪಿ ಕಾಂಗ್ರೆಸ್‌ ನಡುವೆ ಜಟಾಪಟಿ ಶುರುವಾಗಿದೆ. ಮೈಸೂರು ಮಹಾನಗರ ಪಾಲಿಕೆ ವಿರುದ್ಧ ಬಿಜೆಪಿ ನಗರ ಮತ್ತು ಗ್ರಾಮಾಂತರ ಘಟಕದಿಂದ ಪ್ರತಿಭಟನೆ ನಡೆಯುತ್ತಿದೆ. ಕಪ್ಪುಪಟ್ಟಿ ಕಟ್ಟಿಕೊಂಡು ಮೈಸೂರಿನ ಯಾದಗಿರಿ ಚಲುವಾಂಬ ಪಾರ್ಕ್‌ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ  ನಗರ ಅಧ್ಯಕ್ಷ ಎಲ್.ನಾಗೇಂದ್ರ, ಗ್ರಾಮಾಂತರ ಅಧ್ಯಕ್ಷ ಬರಾಕ್ ಲ್.ಆರ್.ಮಹದೇವಸ್ವಾಮಿ, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಮೇಯರ್‌ಗಳು ಹಾಗೂ ಪದಾಧಿಕಾರಿಗಳು ಸೇರಿದಂತೆ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದು, ಸ್ಥಳದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್‌ ಕಾಯ್ದಿರಿಸಿದ್ದಾರೆ.