ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರು ತಮ್ಮ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ (ಆಧಾರ್ ಆಧರಿತ ಹೆಬ್ಬೆಟ್ಟಿನ ದೃಢೀಕರಣ) ಮಾಡಿಸುವುದು, ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಕಡ್ಡಾಯವಾಗಿದೆ. ಹಾಗಾಗಿ ಯಾರು ಕಳೆದ ಹಲವು ವರ್ಷಗಳಿಂದ ತಮ್ಮ ಬಿಪಿಎಲ್ ಪಡಿತರ ಚೀಟಿಗೆ, ಇ-ಕೆವೈಸಿ ಮಾಡಿಸಿಲ್ಲವೋ ಅವರು ಈ ತಿಂಗಳ 31ರೊಳಗೆ ತಪ್ಪದೇ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಿಸಲು ತಿಳಿಸಿದೆ. ನಿಗದಿಪಡಿಸಿದ ದಿನಾಂಕದೊಳಗೆ ಇ-ಕೆವೈಸಿ ಮಾಡಿಸದಿದ್ದಲ್ಲಿ ಅಂತಹವರ ಹೆಸರನ್ನು ಬಿಪಿಎಲ್ ಪಡಿತರ ಚೀಟಿಯಿಂದ ತೆಗೆದು ಹಾಕಲು ಕ್ರಮವಹಿಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.
ಜೊತೆಗೆ ಗೃಹಲಕ್ಷ್ಮಿ ಯೋಜನೆಗೆ ಮಾತ್ರ ಬಿಪಿಎಲ್ ಕಾರ್ಡ್ ಮಾನದಂಡ ಮಾಡಲಾಗಿದೆ. ಬಿಪಿಎಲ್ ಕಾರ್ಡ್ ಕಡಿತವಾದವರಿಗೆ ಈ ಯೋಜನೆ ಸೌಲಭ್ಯ ಕಡಿತವಾಗಲಿದೆ ಎಂದು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಹಾಗೂ ಜಿಲ್ಲಾಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಈ ಹಿಂದೆ ಸ್ಪಷ್ಟಪಡಿಸಿದ್ದಾರೆ