ವೈರಲ್

ಸೀಟ್ ಗಾಗಿ ಜಡೆ ಜಗಳ.. ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಮಹಿಳೆಯರು

ಮೊದಲಿಗೆ ಮಹಿಳೆಯರು ಪರಸ್ಪರ ಬೈದಾಡಿಕೊಂಡಿದ್ದಾರೆ. ನಂತರ ಕೈಕೈ ಮಿಲಾಯಿಸಿ ಚಪ್ಪಲಿಯಲ್ಲಿ ಹೊಡೆದಾಡಿದ್ದಾರೆ. ಈ ವೇಳೆ ಅಡ್ಡ ಬಂದ ಬಾಲಕಿಗೂ ಚಪ್ಪಲಿಯಿಂದ ಮಹಿಳೆ ಹೊಡೆದಿದ್ದಾಳೆ ಇ ಕುರಿತ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಬೆಳಗಾವಿ : ಸೀಟ್‌ ವಿಚಾರಕ್ಕೆ ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರು ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯರು ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ಪಡೆಯಲು ಸವದತ್ತಿಗೆ ಹೋಗುವ ಬಸ್ಸನ್ನು ಮಹಿಳೆಯರು ಹತ್ತಿದ್ದಾರೆ. ಈ ವೇಳೆ ಸೀಟಿಗಾಗಿ  ಎರಡು ಜಡೆಗಳ ಮಧ್ಯ  ಜಗಳ ಆರಂಭವಾಗಿದೆ. 