ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2025ನೇ ಸಾಲಿನ ಆಯವ್ಯಯದಲ್ಲಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ‘ಡೇ ಕೇರ್’ ಸೆಂಟರ್‌ಗಳನ್ನ ಆರಂಭಿಸೋದಾಗಿ ಘೋಷಿಸಿದ್ದಾರೆ.
ಕ್ಯಾನ್ಸರ್ ನಂತಗಹ ಮಾರಣಾಂತಿಕ ಕಾಯಿಲೆ ಪ್ರಸ್ತುತ ದಿನಗಳಲ್ಲಿ ಹೆಚ್ಚಾಗುತ್ತಿದ್ದು, ಅಪಾಯಕಾರಿ ಕಾಯಿಲೆಗೆ ಒಳಗಾದವರ ಕಾಳಜಿ ವಹಿಸಲು ಡೇ ಕೇರ್ ಸೆಂಟರ್‌ಗಳನ್ನ ಆರಂಭಿಸೋದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಮಾರಣಾಂತಿಕ ಕಾಯಿಲೆ. ರೋಗಿಗೆ ಮತ್ತು ಅವನ ಕುಟುಂಬಕ್ಕೆ ಆರ್ಥಿಕ, ಮಾನಸಿಕ ಮತ್ತು ದೈಹಿಕವಾಗಿ ಹಾನಿಯನ್ನುಂಟು ಮಾಡುತ್ತದೆ. ಹೀಗಾಗಿ ಸರ್ಕಾರದಿಂದ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಡೇ-ಕೇರ್ ಸ್ಥಾಪಿಸಲಾಗುತ್ತದೆ. ಆ ಮೂಲಕ, ಚಿಕಿತ್ಸೆಯ ಜೊತೆಗೆ, ರೋಗಿಗೆ ಮತ್ತು ಅವನ ಕುಟುಂಬಕ್ಕೆ ಮಾನಸಿಕ ಬೆಂಬಲ ನೀಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಡೇಕೇರ್ ಸೆಂಟರ್‌ಗಳಲ್ಲಿ ಏನೆಲ್ಲಾ ಸೌಲಭ್ಯಗಳಿರಲಿವೆ?
ಕ್ಯಾನ್ಸರ್ ಪೀಡಿತರಿಗೆ ಡೇ ಕೇರ್ ಸೆಂಟರ್‌ಗಳಲ್ಲಿ ಕಿಮೊಥೆರಪಿ ಇನ್ಫ್ಯೂಷನ್ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಡೇ ಕೇರ್ ಸೆಂಟರ್‌ಗಳು ರೋಗಿಗಳಿಗೆ ಮತ್ತು ಅವರ ಕುಟುಂಬಗಳಿಗೆ ಕ್ಯಾನ್ಸರ್‌ನ ಸವಾಲುಗಳನ್ನು ನಿಭಾಯಿಸಲು ಸಹಾಯ ಮಾಡುತ್ತವೆ. ಮತ್ತು ರೋಗಿಗಳ ಆತ್ಮವಿಶ್ವಸವನ್ನ ಹೆಚ್ಚಿಸುವುದರ ಜೊತೆಜೊತೆಗೆ, ರೋಗಮುಕ್ತರನ್ನಾಗಿ ಮಾಡಲು ಸಹಕಾರಿಯಾಗಿದೆ.