ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ..ತಪ್ಪಿದ ಪ್ರಾಣಾಪಾಯ..!

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹೆಗ್ಗನಹಳ್ಳಿ ಬಳಿ ಖಾಸಗಿ ಬಸ್ ಪಲ್ಟಿಯಾಗಿದೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹೆಗ್ಗನಹಳ್ಳಿ ಬಳಿ ಖಾಸಗಿ ಬಸ್ ಅಪಘಾತ ನಡೆದಿದೆ. ಬಳ್ಳಾರಿಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ನಲ್ಲಿ ಸುಮಾರು, 30 ಜನ ಪ್ರಯಾಣಿಸುತ್ತಿದ್ದರು. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಶಿರಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ.