ಸಮಯಕ್ಕೆ ಸರಿಯಾಗಿ ಬಾರದ KSRTC ಬಸ್ ತಡೆದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ದೊಡ್ಡ ಬ್ಯಾಡರಹಳ್ಳಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಸಿಡಿದೆದಿದ್ದು, ಬಸ್‌ಗಾಗಿ ಹೋರಾಟ ನಡೆಸಿದ್ದಾರೆ.
ಮಂಡ್ಯ-ಪಾಂಡವಪುರ ಮಾರ್ಗದಲ್ಲಿ ನಿತ್ಯ ಸಾವಿರಾರು ವಿದ್ಯಾರ್ಥಿಗಳು ಸಂಚಾರ ನಡೆಸುತ್ತಾರೆ. ಆದರೆ ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಇಲ್ಲ. ಇದರಿಂದಾಗಿ ಮಂಡ್ಯ, ಪಾಂಡವಪುರಕ್ಕೆ ತೆರಳುವ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗುತ್ತಿದೆ. ಜೊತೆಗೆ ಬರುವ ಬಸ್ ಗಳು ಕೂಡ ಸಂಪೂರ್ಣ ಭರ್ತಿಯಾಗ್ತಿದ್ದು, ನಿಲ್ಲಲೂ ಜಾಗವಿಲ್ಲ. ಹಾಗಾಗಿ ಸರ್ಕಾರ ಶಕ್ತಿಯೋಜನೆ ನಿಲ್ಲಿಸಿ, ವಿದ್ಯಾರ್ಥಿಗಳಿಗೆ ಮಾತ್ರ ಫ್ರೀ ಕೊಡಿ ಎಂದು ವಿದ್ಯಾರ್ಥಿಗಳು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಇದೇ ವೇಳೆ ಸ್ಥಳಕ್ಕೆ ಬಂದ ಪಾಂಡವಪುರ ಸಾರಿಗೆ ಅಧಿಕಾರಿಗಳಿಗೂ ವಿದ್ಯಾರ್ಥಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ.