ಮಂಡ್ಯ : ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಂದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವನ್ನಪ್ಪಿದ್ದಾನೆ. ನಿನ್ನೆ ಸಂಜೆ KRSನ ನಾರ್ತ್ ಬ್ಯಾಂಕ್ ನ ಮೀನು ಮಾರಾಟ ಕೇಂದ್ರದ ಬಳಿ ಈ ಘಟನೆ ನಡೆದಿತ್ತು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ KRSನಲ್ಲಿ ನಡೆದಿದೆ.

ಪಾಂಡವಪುರ ತಾಲ್ಲೂಕಿನ ಕುಂಬಾರಕೊಪ್ಪಲು ಗ್ರಾಮದ ಅರುಣ (26) ಎಂಬ ಯುವಕ ಮೃತ ದುರ್ಧೈವಿ. ಕ್ಷುಲ್ಲಕ ಕಾರಣಗಳಿಗಾಗಿ ಇಬ್ಬರ ನಡುವೆ ಜಗಳವಾಗಿ ಕೊಲೆ ನಡೆದಿದೆ. ಮಧ್ಯದ ಅಮಲಿನಲ್ಲಿದ್ದ ಸುಮಂತ್ ಮೀನು ಸ್ವಚ್ಛಗೊಳಿಸಲು ಇಟ್ಟಿದ ಚಾಕುವಿನಿಂದ ಇರಿದಿದ್ದನು. ಅರುಣನ ಹೊಟ್ಟೆಗೆ ಇರಿದು ಹಾಗೂ ಮುಖದ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಅರುಣ್ ನನ್ನು ಚಿಕಿತ್ಸೆಗಾಗಿ ಮೈಸೂರು ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅರುಣ್ ಇಂದು ಸಾವನ್ನಪ್ಪಿದ್ದಾನೆ. ಕೆ.ಆರ್.ಎಸ್. ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.