ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಾದಕ ವಸ್ತುಗಳ ಘಾಟು ಜೋರಾಗಿದೆ. ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಹಿನ್ನಲೆ ಡ್ರಗ್ ಪೆಡ್ಲರ್ಗಳು ಹಾಗೂ ವ್ಯಸನಿಗಳ ಮೇಲೆ ನಗರ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಹದ್ದಿನ ಕಣ್ಣಿನಿಟ್ಟಿದ್ದಾರೆ. ಹೊಸ ವರ್ಷಾಚರಣೆ ಹಿನ್ನಲೆ ಡ್ರಗ್ಸ್ ಪೆಡ್ಲರ್‌ಗಳ ಮಟ್ಟ ಹಾಕಲು ಬೆಂಗಳೂರು ಪೊಲೀಸರು ಪಣ ತೊಟ್ಟಿದ್ದು, ಇಂದು ಡ್ರಗ್ಸ್ ಪೆಡ್ಲರ್‌ಗಳ ಮೇಲೆ ಬೃಹತ್ ಕಾರ್ಯಾಚರಣೆ ನಡೆದಿದೆ.
ಖಚಿತ ಮಾಹಿತ ಮೇರೆಗೆ ಸಿಸಿಬಿ ಪೊಲೀಸರು 71 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ಕೇರಳ ಮೂಲದ ಇಬ್ಬರು ಆರೋಪಿಗಳಿಂದ ವಶಪಡಿಸಿಕೊಂಡು ಆರೋಪಿಗಳನ್ನ ಬಂಧಿಸಿದ್ದಾರೆ. ಆರೋಪಿಗಳು ಕೇರಳದಿಂದ ಕಡಿಮೆ ಬೆಲೆಗೆ ಮಾದಕ ವಸ್ತುವನ್ನು ತಂದು, ಬೆಂಗಳೂರಲ್ಲಿ ಮಾರುತ್ತಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ.
ಇನ್ನೊಂದು ಪ್ರಕರಣದಲ್ಲಿ, ಕಳ್ಳತನದಿಂದ ಬೇಸತ್ತ ನಾಲ್ವರು ಯುವಕರು ಗಾಂಜಾ ಮಾರಾಟ ಮಾಡುತ್ತಿದ್ದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರೆದಿದೆ..