ಬಳ್ಳಾರಿಯಲ್ಲಿ ಬಾಣಂತಿಯರು ಸಾವನ್ನಪ್ಪಿದ ಪ್ರಕರಣ ಸಂಬಂಧ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯೇ..ಸುಳ್ಳುಹೇಳಿ ಅಧಿಕಾರಕ್ಕೆ ಬಂದವರು ಇವರು ಎಂದು ವಾಗ್ದಾಳಿ ನಡೆಸಿದ್ದಾರೆ.
ಅಲ್ಲದೇ ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಜನರ ಮಾರಣ ಹೋಮ ಆಗುತ್ತಿದೆ. ಔಷಧಿ ಕೊಳ್ಳುವಲ್ಲಿ, ಕಾಂಟ್ರ್ಯಾಕ್ಟ್ ವಿಚಾರದಲ್ಲಿ ಅಕ್ರಮ ನಡೆಯುತ್ತಿದೆ. ಮೊದಲು ನೀವು ನೇಮಕ ಮಾಡಿರುವ ಆರೋಗ್ಯ ಸಚಿವರನ್ನ ಉಚ್ಚಾಟನೆ ಮಾಡಿ ಎಂದು ಆಗ್ರಹಿಸಿದ್ದಾರೆ. ಅಲ್ಲದೇ ಜನರ ಪ್ರಾಣ ತೆಗೆಯುವ ಸಚಿವರು ನಮಗೆ ಬೇಡ..ಘಟನೆ ನಡೆದು ಇಷ್ಟು ದಿನವಾದರೂ ಬಳ್ಳಾರಿಗೆ ಹೋಗದವರು ಆರೋಗ್ಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿಗಳು ಎಂದು ಕಿಡಿ ಕಾರಿದ್ದಾರೆ.