ಮೈಸೂರಿನ ಚಾಮುಂಡಿ ಬೆಟ್ಟದ ಉತ್ತರಹಳ್ಳಿ ಸಂಪರ್ಕಿಸುವ ರಸ್ತೆ ಬಳಿ ಏಕಾಏಕಿ ದೊಡ್ಡ ಮಟ್ಟದ ಬೆಂಕಿ ಕಾಣಿಸಿಕೊಂಡಿದೆ. ಕಿಡಿಗೇಡಿಗಳ ಕೃತ್ಯದಿಂದ ಬೆಟ್ಟದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದು, ಅಗ್ನಿಯನ್ನ ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಬೆಂಕಿ ಕೆನ್ನಾಲಿಗೆಗೆ ಗಿಡ-ಮರಗಳು ಸುಟ್ಟು ಕರಕಲಾಗಿದ್ದು, ಬೆಟ್ಟದ ಸುತ್ತ ನೂರಾರು ಎಕರೆ ಪ್ರದೇಶಕ್ಕೆ ಬೆಂಕಿ ಆವರಿಸಿಕೊಂಡಿದೆ. ಬೆಂಕಿ ಹಿನ್ನೆಲೆ ಸಾರ್ವಜನಿಕರಿಗೆ ಉತ್ತನಹಳ್ಳಿ ರಸ್ತೆ ಬಂದ್ ಮಾಡಲಾಗಿದ್ದು, ಬೆಂಕಿ ನಿಯಂತ್ರಣಕ್ಕೆ ಸಿಗದಿರುವ ಹಿನ್ನೆಲೆಯಲ್ಲಿ ಭಾರೀ ಆತಂಕ ಎದುರಾಗಿದೆ.