ಚಿಕ್ಕಬಳ್ಳಾಪುರ: ರಾಜ್ಯ ರಾಜಕೀಯದಲ್ಲಿ ಬಾರಿ ಚರ್ಚೆಯಾಗುತ್ತಿರುವ ವಿಷಯ ಚನ್ನಪಟ್ಟಣ ಬೈ ಎಲೆಕ್ಷನ್. ಅದರಲ್ಲೂ ಭಾರಿ ಕುತೂಹಲಕ್ಕೆ ಕಾರಣವಾಗಿರುವ ಈ ಉಪ ಚುನಾವಣೆಯಲ್ಲಿ ಮೈತ್ರಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವುದು. ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ಈ ಬಗ್ಗೆ ಮಾತನಾಡಿ, ನಮ್ಮ ಅಭ್ಯರ್ಥಿ ಡಿ.ಕೆ.ಸುರೇಶ್ ಎಂದು ಹೇಳಿ, ಅವರ ಗೆಲುವು ನಿಶ್ಚಿತ ಎನ್ನುವ ವಿಶ್ವಾಸದ ಮಾತನ್ನಾಡಿದ್ದಾರೆ.
" ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ಸುರೇಶ್ ಸ್ಪರ್ಧಿಸಲಿದ್ದಾರೆ ಮತ್ತು ಅವರು ಗೆಲುವು ಸಾಧಿಸಲಿದ್ದಾರೆ. ಜೆಡಿಎಸ್ ಮತ್ತು ಬಿಜೆಪಿಯ ಭಿನ್ನಮತ ನಮಗೆ ಸಹಕಾರಿಯಾಗಲಿದೆ. ನಮ್ಮ ಸರ್ಕಾರ ನುಡಿದಂತೆ ನಡೆದಿದೆ, ನಾನು ಕೂಡಾ ನಮ್ಮ ಅಭ್ಯರ್ಥಿ ಪರವಾಗಿ ಮತಯಾಚನೆಗೆ ಹೋಗುತ್ತೇನೆ" ಎಂದು ಪ್ರದೀಪ್ ಈಶ್ವರ್ ಹೇಳಿದ್ದಾರೆ.