ಕರ್ನಾಟಕ

ಚನ್ನಪಟ್ಟಣ ಬೈ ಎಲೆಕ್ಷನ್..ಎಣಿಕಾ ಕೇಂದ್ರದ ಸುತ್ತ ಬಿಗಿ ಬಂದೋಬಸ್ತ್

ಮತ ಎಣಿಕಾ ಕೇಂದ್ರದಲ್ಲಿ ಸಿಸಿಟಿವಿ ಕಣ್ಗಾವಲು ಇರಲಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಕೂಡ ಇರಲಿದೆ.

ಇಂದು ಉಪಚುನಾವಣೆ ಫಲಿತಾಂಶ ಹಿನ್ನೆಲೆ, ಚನ್ನಪಟ್ಟಣದಲ್ಲಿ ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ತಯಾರಿ ಮಾಡಿಕೊಂಡಿದೆ. ಇಂದು ರಾಮನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಣಿಕಾ ಕಾರ್ಯ ನಡೆಯಲಿದೆ.ಮೂರು ಕೊಠಡಿಗಳಲ್ಲಿ ಮತ ಎಣಿಕಾ ಕಾರ್ಯ ನಡೆಯಲಿದ್ದು, ಒಟ್ಟು 14 ಟೇಬಲ್ ನಲ್ಲಿ 69 ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ. ಎಣಿಕಾ ಕೇಂದ್ರದಲ್ಲಿ ಸಿಸಿಟಿವಿ ಕಣ್ಗಾವಲು ಇರಲಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಕೂಡ ಇರಲಿದೆ. ಪ್ಯಾರಾ ಮಿಲಿಟರಿ ಸೇರಿ 500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ನಿನ್ನೆ ಸಂಜೆಯಿಂದಲೇ ಜಿಲ್ಲೆಯಾದ್ಯಂತ ಬಿಎನ್ಎಸ್ 163 ಅಡಿ ನಿಷೇಧಾಜ್ಞೆ ಜಾರಿ ಮಾಡಿದ್ದು, ಮದ್ಯ ಮಾರಾಟವೂ ಬಂದ್ ಮಾಡಲಾಗಿದೆ. ಜೊತೆಗೆ ವಿಜಯೋತ್ಸವ, ಪಟಾಕಿ ಸಿಡಿಸಿ ಸಂಭ್ರಮಿಸುವುದಕ್ಕೆ ಅವಕಾಶ ನೀಡಿಲ್ಲ.