ಕರ್ನಾಟಕ

ಸಂಡೂರಿನಿಂದ ತುಕಾರಾಮ್ ಪತ್ನಿಗೆ ಟಿಕೆಟ್ ಘೋಷಿಸಿದ ಸಿಎಂ ಸಿದ್ದರಾಮಯ್ಯ..!

ಇಂದು ಚನ್ನಪಟ್ಟಣ ಮತ್ತು ಶಿಗ್ಗಾವಿ ಟಿಕೆಟ್ ವಿಚಾರ ತೀರ್ಮಾನ ಆಗುತ್ತೆ. ಸಂಜೆ ವೇಳೆಗೆ ಮೂರು ಕ್ಷೇತ್ರಗಳ ಟಿಕೆಟ್ ಘೋಷಣೆ ಆಗುತ್ತದೆ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು : ಸಂಡೂರಿನಿಂದ ತುಕಾರಾಮ್ ಪತ್ನಿಗೆ ಟಿಕೆಟ್ ನೀಡುತ್ತೇವೆ. ಜೊತೆಗೆ ಇಂದು ಚನ್ನಪಟ್ಟಣ ಟಿಕೆಟ್ ಸಹ ಘೋಷಣೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

 ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದರಾದ ಈ.ತುಕಾರಾಂ ಅವರ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಎಐಸಿಸಿ ಯಿಂದ ಟಿಕೆಟ್ ಘೋಷಣೆಯ ಮೊದಲೇ ಸಿಎಂ ಸಿದ್ದರಾಮಯ್ಯ ಅವರು ಸಂಡೂರು ಟಿಕೆಟ್‌ ಘೋಷಣೆ ಮಾಡಿದ್ದಾರೆ.

ಇನ್ನು ಚನ್ನಪಟ್ಟಣ ಕ್ಷೇತ್ರಕ್ಕೆ ಡಿ.ಕೆ. ಸುರೇಶ್ ಹೆಸರು ಕೂಡ ಇದೆ. ನಮ್ಮ ಪಕ್ಷದ ಅಧ್ಯಕ್ಷರೇ ಅಲ್ಲಿ ಇರುವ ಕಾರಣ ಅವರೇ ಸೂಕ್ತ ಅಭ್ಯರ್ಥಿ ತೀರ್ಮಾನ  ಮಾಡುತ್ತಾರೆ. ಒಳ್ಳೆ ಅಭ್ಯರ್ಥಿ ಹಾಕಬೇಕು ಅಂತಾ ಹೇಳಿದ್ದೇನೆ ಎಂದಿದ್ದಾರೆ. ಜೊತಗೆ ಇಂದು ಚನ್ನಪಟ್ಟಣ ಮತ್ತು ಶಿಗ್ಗಾವಿ ಟಿಕೆಟ್ ವಿಚಾರ ತೀರ್ಮಾನ ಆಗುತ್ತೆ. ಸಂಜೆ ವೇಳೆಗೆ ಮೂರು ಕ್ಷೇತ್ರಗಳ ಟಿಕೆಟ್ ಘೋಷಣೆ ಆಗುತ್ತದೆ‌ ಎಂದು ತಿಳಿಸಿದ್ದಾರೆ.