ಅಯೋಧ್ಯೆ ರಾಮಮಂದಿರದ ಪ್ರಧಾನ ಅರ್ಚಕರಾದ ಆಚಾರ್ಯ ಸತ್ಯೇಂದ್ರ ದಾಸ್ ನಿಧನರಾಗಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವ ಹಿನ್ನೆಲೆಯಲ್ಲಿ ಫೆಬ್ರವರಿ 3 ರಂದು ಅವರನ್ನು ಲಕ್ನೋದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಕೊನೆಯುಸಿರೆಳೆದ್ದಿದ್ದಾರೆ. ಆಚಾರ್ಯ ಸತ್ಯೇಂದ್ರ ದಾಸ್ ಅವರು ಸತತ 34 ವರ್ಷಗಳಿಂದ ರಾಮಲಲ್ಲಾಗೆ ಪೂಜೆ ಸಲ್ಲಿಸಿಕೊಂಡು ಬರುತ್ತಿದ್ದು, 87ನೇ ವಯಸ್ಸಿಗೆ ಇಹಲೋಕವನ್ನ ತ್ಯಜಿಸಿದ್ದಾರೆ.
ಸತ್ಯೇಂದ್ರ ದಾಸ್ ನಿಧನಕ್ಕೆ ದೇಶಾದ್ಯಂತ ಸಂತಾಪ ಸೂಚಿಸಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದುಃಖ ವ್ಯಕ್ತಪಡಿಸಿದ್ದಾರೆ. ಶ್ರೀ ರಾಮ ಜನ್ಮಭೂಮಿ ದೇವಾಲಯದ ಪ್ರಧಾನ ಅರ್ಚಕ, ಶ್ರೀ ಅಯೋಧ್ಯಾ ಧಾಮ್‌ನ ಶ್ರೀ ರಾಮನ ಪರಮ ಭಕ್ತ ಆಚಾರ್ಯ ಶ್ರೀ ಸತ್ಯೇಂದ್ರ ಕುಮಾರ್ ದಾಸ್ ಜಿ ಮಹಾರಾಜ್ ನಿಧನ ಅತ್ಯಂತ ದುಃಖಕರ ಮತ್ತು ಆಧ್ಯಾತ್ಮಿಕ ಜಗತ್ತಿಗೆ ತುಂಬಲಾಗದ ನಷ್ಟವಾಗಿದೆ ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕಕೊಂಡಿದ್ದಾರೆ.