ಅತಿಯಾದ ಜ್ವರದಿಂದ ಬಳಲುತ್ತಿದ್ದ ಬಾಲಕ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯ ಎಂಬ ಆರೋಪ ಕೇಳಿ ಬರುತ್ತಿದೆ. ಈ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ.
ಅಜ್ಜಂಪುರ ಗ್ರಾಮದ ಅಶೋಕ್ ಎಂಬುವರ ಮಗ, ಸೋನೇಶ್ (7) ಸಾವನ್ನಪ್ಪಿದ ಬಾಲಕ ಎನ್ನಲಾಗುತ್ತಿದೆ. ಖಾಸಗಿ ಆಸ್ಪತ್ರೆ ವೈದ್ಯರು ನೀಡಿದ ಇಂಜೆಕ್ಷನ್ ನಿಂದ ಮಗು ಸಾವನ್ನಪ್ಪಿದೆ ಎಂದು ವೈದ್ಯ ವರುಣ್ ವಿರುದ್ಧ ಆರೋಪ ಕೇಳಿ ಬರುತ್ತಿದೆ.