ಚಿರತೆ ದಾಳಿಗೆ ನಾಲ್ಕು ಕುರಿಗಳು ಬಲಿಯಾಗಿರುವ ಘಟನೆ, ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಅಗಸನಪುರ ಗ್ರಾಮದಲ್ಲಿ ನಡೆದಿದೆ. ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ ಕುರಿಗಳ ಮೇಲೆ 3 ಚಿರತೆಗಳು ದಾಳಿ ಮಾಡಿವೆ. ಕುರಿ ಮಾಲೀಕರಾದ ರತ್ನಮ್ಮ ಹಾಗೂ ಬಸವರಾಜು ಎಂಬುವರು ಭಯಭೀತರಾಗಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತಂಕಗೊಂಡ ಗ್ರಾಮಸ್ಥರು ಬೋನು ಇಟ್ಟು ಚಿರತೆ ಸೆರೆ ಹಿಡಿಯುವಂತೆ, ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ. ಜೊತೆಗೆ ಸೂಕ್ತ ಪರಿಹಾರ ಕೂಡ ನೀಡುವಂತೆ ಒತ್ತಾಯಿಸಿದ್ದಾರೆ.