ಕರ್ನಾಟಕ

ವ್ಹೀಲ್‌ ಚೇರ್‌ನಲ್ಲಿ ವಿಧಾನಸೌಧಕ್ಕೆ ಬಂದ ಸಿಎಂ !

ಮಂಡಿ ನೋವಿನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವೀಲ್‌ ಚೇರ್‌ ನಲ್ಲಿ ವಿಧಾನಸೌಧಕ್ಕೆ ಪ್ರವೇಶ ಮಾಡಿದರು

ಬೆಂಗಳೂರು - ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸೌಧಕ್ಕೆ ಆಗಮಿಸಿದರು. ಕಳೆದ ಎರಡು ವಾರಗಳ ಬಳಿಕ ವಿಧಾನಸೌಧಕ್ಕೆ ಮಂಡಿ ನೋವಿಗೆ ಚಿಕಿತ್ಸೆ ಪಡೆಯುತ್ತಿರುವ ಸಿಎಂ ಸಿದ್ದರಾಮಯ್ಯ ವ್ಹೀಲ್ ಚೇರ್ ನಲ್ಲಿ ಬಂದಿದರು. ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ರೈತ ಮುಖಂಡರ ಜೊತೆ ಸಿಎಂ ಇಂದು ಸಭೆ ನಡೆಸಲಿದ್ದಾರೆ. 

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ , ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ . ಅತಿ ಹೆಚ್ಚು ಉದ್ಯೋಗ ಅವಲಂಬನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆದ್ಯತೆ ಇದೆ. ಮುಖ್ಯಮಂತ್ರಿ ಆದ ನಾನು ಸದಾ ರೈತ ಕುಲದ ಪರವಾಗಿ ಇರುತ್ತೇನೆ ಎಂದು ಭರವಸೆ ನೀಡಿದರು. ಹಾಗೇ  ಸಭೆಯ ಪ್ರಾರಂಭಕ್ಕೂ ಮುನ್ನ ವಿವಿಧ ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಿಎಂಗೆ ಮನವಿ ಪತ್ರ ಸಲ್ಲಿಕೆ ಮಾಡಿದರು. ಜೊತೆಗೆ ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಗಳ ಬಲವಂತದ ವಸೂಲಿಗೆ ಕಡಿವಾಣ ಹಾಕಿದ್ದಕ್ಕಾಗಿ ರೈತ ಮುಖಂಡರು ಸಿಎಂ ಸಿದ್ದರಾಮಯ್ಯ ಮತ್ತು ಸರ್ಕಾರವನ್ನು ಒಕ್ಕೋರಲಿನಿಂದ ಅಭಿನಂದನೆ ಸಲ್ಲಿಸಿದರು.