ದೇಶ

ದೆಹಲಿಗೆ ತೆರಳಿದ ಸಿಎಂ, ಡಿಸಿಎಂ.. ʼಕೈʼ ಪಡೆಯಲ್ಲಿ ಸಂಚಲನ..!

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಆಂತರಿಕ ಬೆಳವಣಿಗೆಗಳ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ & ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿದ್ದಾರೆ.

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಆಂತರಿಕ ಬೆಳವಣಿಗೆಗಳ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ & ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿದ್ದಾರೆ.. ಇಬ್ಬರು ನಾಯಕರ ದಿಢೀರ್‌ ಪ್ರವಾಸ ತೀವ್ರ ಕುತೂಹಲ ಕೆರಳಿಸಿದೆ.. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಬಣದ ಮಧ್ಯೆ ʼಅಧಿಕಾರ ಹಂಚಿಕೆʼ ಫೈಟ್‌ ಸಲುವಾಗಿ ಬಹಿರಂಗ ಹೇಳಿಕೆ ಕೊಡೋದು ನಿರಂತರವಾಗಿ ನಡೆಯುತ್ತಲೇ ಇದೆ.. ಅಷ್ಟೇ ಅಲ್ಲದೇ ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಚರ್ಚೆಗಳ ನಡುವೆ ಇದೀಗ ಇಬ್ಬರು ನಾಯಕರು ಹೈಕಮಾಂಡ್‌ ಭೇಟಿಗೆ ದೆಹಲಿಗೆ ತೆರಳಿದ್ದಾರೆ.. ಅಧಿಕೃವಾಗಿ ಪಕ್ಷದ ಕಾರ್ಯಕ್ರಮದ ನಿಮಿತ್ತ ದೆಹಲಿಗೆ ತೆರಳುತ್ತಿದ್ದರೂ, ಬಳಿಕ ವೈಯಕ್ತಿಕವಾಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸುವ ಸಾಧ್ಯತೆ ಇದೆ..