ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಸಿಎಂ ಸಿದ್ದರಾಮಯ್ಯ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.. ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಿ, ಬಲಿಷ್ಠ ಕಾಯ್ದೆಯನ್ನು ಆದಷ್ಟು ಬೇಗನೆ ಜಾರಿ ಮಾಡಲು ನಿರ್ಧಾರ ಮಾಡಲಾಗಿದೆ... ಈ ಕುರಿತು ಕಾನೂನು ಇಲಾಖೆ, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ..
• ಕಾಯ್ದೆ ಸಂಪೂರ್ಣ ಸಂವಿಧಾನಬದ್ಧವಾಗಿದ್ದು, ಯಾವುದೇ ಲೋಪದೋಷಗಳನ್ನು ಹೊಂದಿರಬಾರದು..
• ಸಾಲಗಾರರು ಎದುರಿಸುತ್ತಿರುವ ಕಿರುಕುಳವನ್ನು ತಪ್ಪಿಸಲು ಹಾಗೂ ಸಾಲ ನೀಡಿದವರು ಬಲವಂತದ ವಸೂಲಿ ಮಾಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ಬಲಿಷ್ಠ ಕಾಯ್ದೆ ರಚಿಸಲಾಗುತ್ತಿದೆ..
• ಕಾಯ್ದೆಯಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ.. ಒಂಬುಡ್ಸ್‌ಮೆನ್ ಗಳ ನೇಮಕ ಮಾಡಲಾಗುವುದು.. ಅಮಾನವೀಯವಾಗಿ ಬಲವಂತದ ಸಾಲ ವಸೂಲಾತಿ ಮಾಡುವವರಿಗೆ ಜಾಮೀನುರಹಿತ ಪ್ರಕರಣ ದಾಖಲು ಸೇರಿದಂತೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶ ಸಿಗಲಿದೆ..
• ನೋಂದಣಿಯಾಗದ ಲೇವಾದೇವಿಗಾರರ ಕಿರುಕುಳವನ್ನು ತಪ್ಪಿಸಲು ಕಠಿಣ ಕಾನೂನು ಜಾರಿ ಮಾಡಲಾಗುತ್ತಿದೆ..
• ಪ್ರಸ್ತುತವಿರುವ ಕಾನೂನಿನಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ನಿಯಂತ್ರಿಸಲು ಹಲವು ಅವಕಾಶಗಳಿದ್ದು, ಅದನ್ನು ಯಾಕೆ ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿಲ್ಲ.. ದೂರು ದಾಖಲು ಮಾಡುವ ತನಕ ಕಾಯದೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು..