ಕೊಪ್ಪಳ: ರಾಜ್ಯದಲ್ಲಿ ಮುಂಗಾರು ಮಳೆಗೆ ತುಂಗಭದ್ರಾ ಜಲಾಶಯ ಭರ್ತಿಯಾಗಿದ್ದು, ಸಿಎಂ ಸಿದ್ದರಾಮಯ್ಯ ಇಂದು ಬೆಳಗ್ಗೆ 11.15ಕ್ಕೆ ಬಾಗಿನ ಅರ್ಪಿಸಿದರು.
ತುಂಗಭದ್ರಾ ಡ್ಯಾಂಗೆ ರಾಜ್ಯದ ಮುಖ್ಯಮಂತ್ರಿಯೊಬ್ಬರು ಇದೇ ಮೊದಲ ಬಾರಿ ಬಾಗಿನ ಅರ್ಪಿಸುತ್ತಿರುವುದು . ಭರ್ತಿಯಾಗಿದ್ದ ಜಲಾಶಯಕ್ಕೆ ಸಿದ್ದರಾಮಯ್ಯ ಈ ಹಿಂದೆಯೇ ಬಾಗಿನ ಅರ್ಪಿಸಬೇಕಿತ್ತು. ಆದರೆ, ಡ್ಯಾಂನ 19ನೇ ಕ್ರಸ್ಟ್ ಗೇಟ್ ಮುರಿದ ಹಿನ್ನೆಲೆಯಲ್ಲಿ ಆ ಕಾರ್ಯಕ್ರಮ ರದ್ದಾಗಿತ್ತು. ಇದೀಗ ಗೇಟ್ ರಿಪೇರಿಯಾಗಿ ಮತ್ತೆ ಜಲಾಶಯ ಭರ್ತಿಯಾಗಿದ್ದು, ಸಿಎಂ ಬಾಗಿನ ಅರ್ಪಿಸಿದರು.