ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠದಲ್ಲಿ ವಿಚಾರಣೆ ಆರಂಭವಾಗಿದೆ.
ಈಗಾಗಲೇ ರಾಜ್ಯಪಾಲರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ರಾಜ್ಯ ಸರ್ಕಾರದ ಪರವಾಗಿ ಶಶಿಕಿರಣ್
ಶೆಟ್ಟಿ ವಾದ ಮಂಡಿಸಿದ್ದಾರೆ. ಇದೀಗ ಕೊನೆಯ ವಾದವಾಗಿ ಮುಖ್ಯಮಂತ್ರಿಗಳ ಪರ ಹಿರಿಯ ವಕೀಲರಾದ ಅಭಿಷೇಕ್
ಮನು ಸಿಂಘ್ವಿ ಮತ್ತು ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಲಿದ್ದಾರೆ
ಅರ್ಜಿದಾರರು ಮತ್ತು ಪ್ರತಿವಾದಿಗಳ ಪರವಾಗಿ ಗುರುವಾರ ವಾದ ಪೂರ್ಣಗೊಳ್ಳುವ
ಸಾಧ್ಯತೆಯಿದ್ದು, ಈ ವಾರವೇ ತೀರ್ಪು ಪ್ರಕಟವಾಗುವ ಸಾಧ್ಯತೆ ಹೆಚ್ಚಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ ) ದಲ್ಲಿ ತಮ್ಮ ಕುಟುಂಬಸ್ಥರಿಗೆ
ಕಾನೂನು ಬಾಹಿರವಾಗಿ ನಿವೇಶನ ಪಡೆದಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿತ್ತು ಈ ಹಿನ್ನಲೆಯಲ್ಲಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ
ರಾಜ್ಯಪಾಲರು ಅನುಮತಿ ನೀಡಿದ್ರು..