2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಸಿದ್ಧತೆ ನಡೆಯುತ್ತಿದ್ದು, ಇಂದಿನಿಂದ ಸಿಎಂ ಸಿದ್ದರಾಮಯ್ಯ ಬಜೆಟ್ ಪೂರ್ವ ಸಭೆ ಆರಂಭಿಸಲಿದ್ದಾರೆ. ಇಡೀ ದಿನ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಬಜೆಟ್ ಸಿದ್ಧತಾ ಸಭೆ ನಡೆಸಲಿದ್ದಾರೆ. ಬೆಳಿಗ್ಗೆ 11 ಗಂಟೆಯಿಂದ ಸಂಜೆ 6:30ವರೆಗೂ ನಿರಂತರ ಸಭೆ ನಡೆಯಲಿದೆ.
ಇಂದು ಒಟ್ಟು 13 ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಲಿದ್ದು, ಒಳಾಡಳಿತ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ, ಸಣ್ಣ ಕೈಗಾರಿಕೆ, ಇಂಧನ, ಲೋಕೋಪಯೋಗಿ, ಕಾರ್ಮಿಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ. ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ವಿಶೇಷ ಚೇತನದ ಹಾಗೂ ಹಿರಿಯ ನಾಗರಿಕರ ಹಾಗೂ ಸಹಕಾರ, ರೇಷ್ಮೆ, ಪಶುಸಂಗೋಪನೆ ಇಲಾಖೆ ಸೇರಿ ವಿವಿಧ ಇಲಾಖೆಗಳ ಸಭೆಯನ್ನ ನಡೆಸಲಿದ್ದಾರೆ.