ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆದಿದ್ದು, ಹೈಕೋರ್ಟ್‌ನಿಂದ ಮಹತ್ವದ ಆದೇಶ ಹೊರ ಬಿದ್ದಿದೆ. ವಿಚಾರಣೆಗೆ ಹಾಜರಾಗುವಂತೆ ನೀಡಲಾಗಿದ್ದ ಇ.ಡಿ ಸಮನ್ಸ್‌ಗೆ ತಡೆ ನೀಡಲಾಗಿದೆ. ಮುಂದಿನ ವಿಚಾರಣೆವರೆಗೂ ಮಧ್ಯಂತರ ತಡೆ ನೀಡಿ, ನ್ಯಾ. ಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಅಂದರೆ ಫೆಬ್ರವರಿ 10ರ ವರೆಗೆ ಇ.ಡಿ ಸಮನ್ಸ್ ನೀಡಬಾರದು ಎಂದು ಆದೇಶ ಹೊರಡಿಸಿದೆ.ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ಗೂ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಸಚಿವ ಬೈರತಿ ಸುರೇಶ್ ಹಾಗೂ ಸಿಎಂ ಪತ್ನಿ ಪಾರ್ವತಿ ಅವರಿಗೆ ಇ.ಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ನೋಟಿಸ್ ಪ್ರಶ್ನಿಸಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಬೈರತಿ ಸುರೇಶ್ ಬೆಂಗಳೂರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಇ.ಡಿ ಸಮನ್ಸ್‌ಗೆ ಹೈಕೋರ್ಟ್ ತಡೆ ನೀಡಿದ್ದು, ಇಬ್ಬರಿಗೂ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.