ಮಂಡ್ಯ : ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ ವಿಚಾರಕ್ಕೆ ಸಂಬಂಧಸಿದಂತೆ ಆದಿಚುಂಚನಗಿರಿಯಲ್ಲಿ ಮಾಜಿ ಡಿಸಿಎಂ ಅವರು ಪ್ರತಿಕ್ರಿಯೆ ನೀಡಿದ್ದು, ಸತ್ಯ ಎತ್ತಿಹಿಡಿಯುವ ಕೆಲಸವಾಗಿದೆ. ಪಾರದರ್ಶಕ ತನಿಖೆ ನಡೆಯಲಿ. ಹೈಕೋರ್ಟ್ ಆದೇಶ ಸ್ವಾಗತಿಸಿಸುತ್ತೇವೆ, ಸತ್ಯಕ್ಕೆ ಗೆಲುವಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಮಾತನಾಡಿದ ಅವರು, ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು. ರಾಜ್ಯದ ಎಲ್ಲಾ ಜನರಿಗೂ ಕೇಸ್ ಬಗ್ಗೆ ಗೊತ್ತಿದೆ. ಅವರ ಕೈವಾಡ, ಅಧಿಕಾರ ದುರ್ಬಳಕೆ ಸ್ಪಷ್ಟವಾಗಿದೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಜನರು ಆಗ್ರಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.