ಕರ್ನಾಟಕ

ನಕ್ಸಲರು ಮುಖ್ಯವಾಹಿನಿಗೆ ಬರಬೇಕು..ಶಾಂತಿಯುತ ಹೋರಾಟಕ್ಕೆ ನಮ್ಮ ತಕರಾರಿಲ್ಲ; ಸಿಎಂ ಸಿದ್ದರಾಮಯ್ಯ

ಆರು ನಕ್ಸಲರು ಶರಣಾಗಿದ್ದು ಅವರು ತಮ್ಮ ಶಸ್ತ್ರಾಸ್ತ್ರ ಹೋರಾಟ ನಿಲ್ಲಿಸಿ ಮುಖ್ಯವಾಹಿನಿಗೆ ಬರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಆರು ನಕ್ಸಲರು ಶರಣಾಗಿದ್ದು ಅವರು ತಮ್ಮ ಶಸ್ತ್ರಾಸ್ತ್ರ ಹೋರಾಟ ನಿಲ್ಲಿಸಿ ಮುಖ್ಯವಾಹಿನಿಗೆ ಬರಬೇಕು. ಶಾಂತಿಯುತ ಹೋರಾಟಕ್ಕೆ ನಮ್ಮ ತಕರಾರೇನಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಂವಿಧಾನದಲ್ಲಿ ಶಾಂತಿಯುತ ಹೋರಾಟಕ್ಕೆ ಅವಕಾಶವಿದ್ದು, ಅದರಂತೆ ಹೋರಾಟ ಮಾಡಿದರೆ ಅದಕ್ಕೆ ಸಹಕಾರವಿದೆ. ನಕ್ಸಲರ ಶರಣಾಗತಿಯ ಬಗ್ಗೆ  ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ  ಅಣ್ಣಾಮಲೈ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅವರು ಜಿಲ್ಲಾ ವರಿಷ್ಠಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಸರ್ಕಾರಿ ನೌಕರರಾಗಿದ್ದರು. ಈಗ ರಾಜಕೀಯದಲ್ಲಿದ್ದಾರೆ. ಬಿಜೆಪಿ   ರಾಜ್ಯಾಧ್ಯಕ್ಷರಾಗಿದ್ದು ಅವರಿಂದ ನಾವೇನು ನಿರೀಕ್ಷೆ ಮಾಡಲು ಸಾಧ್ಯ  ಎಂದು ಹೇಳಿದ್ದಾರೆ.