ಕರ್ನಾಟಕ

ಮುಡಾ ಕೇಸ್​...ಇಂದು ಸಿಎಂಗೆ ‘ಲೋಕಾ’ ವಿಚಾರಣೆ..!

ಮುಡಾ ಹಗರಣದ ಆರೋಪದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ಇಂದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಮುಡಾ ಹಗರಣದ ಆರೋಪ ಹೊತ್ತಿರುವ ಸಿಎಂ ಸಿದ್ದರಾಮಯ್ಯಗೆ ಅಡಕತ್ತರಿಯಲ್ಲಿ ಸಿಲುಕಿದಂತಾಗಿದೆ. ಇಂದು 9:30ಕ್ಕೆ ಮೈಸೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು, ಸಿಎಂ ಸಿದ್ದರಾಮಯ್ಯ ಅವರ ವಿಚಾರಣೆ ನಡೆಸಲಿದ್ದಾರೆ. ವಿಚಾರಣೆಗೂ ಮುನ್ನ ಈಗಾಗಲೇ ಸಿಎಂ ಸಿದ್ದರಾಮಯ್ಯ, ಆಪ್ತರು ಹಾಗೂ ಕಾನೂನು ಸಲಹೆಗಾರ ಪೊನ್ನಣ್ಣ ಜೊತೆಗೆ ಚರ್ಚೆ ನಡೆಸಿದ್ದಾರೆ. ಈಗಾಗಲೇ ಸಿಎಂ ಬಾಮೈದ ಹಾಗೂ ಪತ್ನಿಯ ವಿಚಾರಣೆ ನಡೆದಿದೆ. ವಿಚಾರಣೆ ಬಳಿಕ ಇಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ರಾಮನಗರಕ್ಕೆ ತೆರಳಲಿದ್ದಾರೆ.

ಇಂದು ಸಿಎಂ ಸಿದ್ದರಾಮಯ್ಯ ಮೈಸೂರಿಗೆ ತೆರಳುವ ಹಿನ್ನೆಲೆ, ಮೈಸೂರಿನಲ್ಲಿ ಭದ್ರತೆ ಕಾಯ್ದಿರಿಸಲಾಗಿದೆ. ಅದರಲ್ಲೂ ಮೈಸೂರು ಲೋಕಾಯುಕ್ತ ಕಚೇರಿ ಬಳಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ರಸ್ತೆಗಳಲ್ಲಿ ಬ್ಯಾರಿಕೇಡ್ ಅಳವಡಿಸಿದ್ದು, ಕಚೇರಿಗೆ ರಸ್ತೆ ಕಲ್ಪಿಸುವ ಎಲ್ಲಾ ರಸ್ತೆಗಳನ್ನ ಬಂದ್ ಮಾಡಲಾಗಿದೆ.