ಇಂದು ಸಿಎಂ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ, ಮೊದಲನೇ ಹಂತಕ್ಕೆ ಚಾಲನೆ ನೀಡಿದರು. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಲಾಯಿತು.
ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿ ಐದು ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.