ತುಮಕೂರು : ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಂಭೀರವಾಗಿ ಗಾಯಗೊಂಡ ಘಟನೆಯೊಂದು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಟಿ. ಎನ್ ಪೇಟೆ ಬಳಿ ನಡೆದಿದೆ. ಆಂದ್ರದ ಕೊರಗ ಗ್ರಾಮದ ನಿವಾಸಿ ರಾಜು (25) ಮೃತ ದುರ್ದೈವಿಯಾಗಿದ್ದಾನೆ.

ಬೈಕ್ ಒಂದು ಆಂದ್ರದ ರೊದ್ದಂನಿಂದ ಪಾವಗಡ ಕಡೆ ಬರ್ತಿದ್ದ ವೇಳೆ ಟಿ. ಎನ್ ಪೇಟೆ ಕಡೆಯಿಂದ ಹೋಗುತ್ತಿದ್ದ ಬೈಕ್ ಡಿಕ್ಕಿಯಾಗಿದೆ. ಸ್ಥಳದಲ್ಲೆ ಓರ್ವ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ಬೈಕ್ ಸವಾರನಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾರುತಿ ಪ್ರಸಾದ್ (29), ಗಂಭೀರವಾಗಿ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಸದ್ಯ, ಗಾಯಾಳುಗೆ ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುಯತ್ತಿದೆ ಎಮದು ತಿಳಿದುಬಂದಿಂದೆ.
ಘಟನೆ ಸಂಬಂಧ ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸದ್ಯ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.