ಕರ್ನಾಟಕ
ಬೈಕ್‌ಗೆ ಟಿಪ್ಪರ್ ಡಿಕ್ಕಿ : ಸ್ಥಳದಲ್ಲೇ ಇಬ್ಬರು ಸಾವು
ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ.
ತುಮಕೂರು : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ತುಮಕೂರು ತಾಲೂಕಿನ ಯಲ್ಲಾಪುರ ಬಳಿ ಈ ಘಟನೆ ನಡೆದಿದೆ. ತಡರಾತ್ರಿ ಸಂಬಂಧಿಕರ ಬರ್ತಡೇ ಪಾರ್ಟಿಯಲ್ಲಿ ಊಟ ಮುಗಿಸಿ ಮನೆಗೆ ತೆರಳುವಾಗ ಈ ಅಪಘಾತ ನಡೆದಿದ್ದು, ಉಮಾ (50), ವಿನೋದ್ (24), ಮೃತ ದುರ್ದೈವಿಗಳಾಗಿದ್ದಾರೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಘಟನೆ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.