ಕರ್ನಾಟಕ

ಕಾಂಗ್ರೆಸ್​ ಸೇರಿದ ಸೈನಿಕನ ದೇಹದಲ್ಲಿ ಹರಿಯುತ್ತಿದೆಯಂತೆ ಕಾಂಗ್ರೆಸ್​ ರಕ್ತ..! ಹೇಳಿದ್ಯಾರು ಗೊತ್ತ.?

ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ.

ಬೆಂಗಳೂರು: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ. ಹೀಗಾಗಿ ಅವರು ಯಾವುದೇ ಷರತ್ತುಗಳನ್ನು ವಿಧಿಸದೆ ಮತ್ತೊಮ್ಮೆ ಮರಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಗುರುವಾರ ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್‌ನಿಂದ ಚನ್ನಪಟ್ಟಣ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. 

ಕೆಪಿಸಿಸಿ ಕಚೇರಿಯಲ್ಲಿ ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಪಿವೈ ಮೊದಲು ನಮ್ಮ ಪಕ್ಷದಲ್ಲೇ ಇದ್ದು ಕಾಂಗ್ರೆಸ್‌ನಿಂದ 2 ಬಾರಿ ಶಾಸಕರಾಗಿದ್ದವರು. ಕಾರಣಾಂತರ ಗಳಿಂದ ಪಕ್ಷ ಬಿಟ್ಟಿದ್ದರು. ಇದೀಗ ಮರಳಿ ಬೇಷರತ್ ಆಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎಂದರು.