ರಾಜ್ಯ ಬೆಳಗಾವಿ ವಿಧಾನಸಭೆ ಚಳಿಗಾಲ ಅಧಿವೇಶನದಲ್ಲೂ ಅಮಿತ್ ಶಾ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.. ಅಂಬೇಡ್ಕರ್ ಮತ್ತು ಅವರ ಅನುಯಾಯಿಗಳ ಅವಮಾನಿಸಿದ್ದಾರೆಂದು ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.. ಸದನ ಡೆಸ್ಕ್‌ಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಹಾಕಿಕೊಂಡು ಕಾಂಗ್ರೆಸ್ ನಾಯಕರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.. ಯಾವಾಗ ನೋಡಿದರೂ ಅಂಬೇಡ್ಕರ್.. ಅಂಬೇಡ್ಕರ್ ಎಂದು ಹೇಳುವುದು ಒಂದು ಶೋಕಿಯಾಗಿ ಬಿಟ್ಟಿದೆ.. ಅಂಬೇಡ್ಕರ್ ಬದಲಿಗೆ ದೇವರ ಹೆಸರನ್ನು ಜಪಿಸಿದ್ದರೆ ಇಷ್ಟು ಹೊತ್ತಿಗೆ ಸ್ವರ್ಗವಾದರೂ ಪ್ರಾಪ್ತಿಯಾಗಿ ಬಿಡುತ್ತಿತ್ತು ಎನ್ನುವ ಅಮಿತ್ ಶಾ ಹೇಳಿಕೆಗೆ ಕಾಂಗ್ರೆಸ್ ಕೆಂಡಾಮಂಡಲವಾಗಿದೆ.. ಉಭಯ ಸದನಗಳಲ್ಲೂ ಕಾಂಗ್ರೆಸ್ ಸದಸ್ಯರ ಡೆಸ್ಕ್ ಬಳಿ ಅಂಬೇಡ್ಕರ್ ಭಾವಚಿತ್ರ ಹಾಕಲಾಗಿದ್ದು, ಅಮಿತ್ ಶಾ ವಿರುದ್ಧ ಘೋಷಣೆ ಕೂಗಲಾಗಿದೆ..