ಮಂಡ್ಯ : ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸಿದೆ ಎಂದು ಕಾಂಗ್ರೆಸ್ ವಿರುದ್ಧ ಕೆ.ಆರ್.ಪೇಟೆಯಲ್ಲಿ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ವಾಗ್ದಾಳಿ ನಡೆಸಿದರು.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಮಾತನಾಡಿದ ಅವರು, ಮೂರು ಕ್ಷೇತ್ರದಲ್ಲೂ ನಮ್ಮ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಬೇಕಿತ್ತು. ಆದ್ರೆ ಕಾಂಗ್ರೆಸ್ ಮೂರು ಕ್ಷೇತ್ರದಲ್ಲೂ ತನ್ನ ಅಧಿಕಾರ ಬಳಸಿದೆ. ಹಣದ ಹೊಳೆ ಹರಿಸಿದ ಕಾರಣ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಆರೋಪಿಸಿದರು.