ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದ ಆರೋಪವನ್ನು ಪ್ರಿಯಾಂಕ್ ಖರ್ಗೆ ವಿರುದ್ಧ ಹೊರಿಸಿರುವ ಹಿನ್ನೆಲೆ, ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯದ ಸಂಜಯ ಸರ್ಕಲ್‌ನಲ್ಲಿ ತಮಟೆ ಹೊಡೆಯುವ ಮೂಲಕ ಚಳವಳಿ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು, ಪ್ರಗತಿಪರ ಸಂಘಟನೆಗಳು ಮಾನವ ಸರಪಳಿ ನಿರ್ಮಿಸಿ ಕೆಲಕಾಲ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕರಾದ ಸಿ.ಟಿ.ರವಿ, ಬಿ.ವೈ.ವಿಜಯೇಂದ್ರ, ಮುನಿರತ್ನ, ಛಲವಾದಿ ನಾರಾಯಣ ಸ್ವಾಮಿ ಭಾವಚಿತ್ರ ಹಿಡಿದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.