ದೇಶ
ದೆಹಲಿ ಚುನಾವಣೆ ಎಕ್ಸಿಟ್‌ಪೋಲ್‌ಗೆ ಕೌಂಟ್‌ಡೌನ್.. ಯಾರಿಗೆ ಅಧಿಕಾರ..?
ದೆಹಲಿ ವಿಧಾನಸಭೆಯ 70 ಸ್ಥಾನಗಳಿಗೆ ಮತದಾನ ಮುಕ್ತಾಯಗೊಂಡಿದೆ.. 70 ಸ್ಥಾನಗಳಿಗೆ ಒಟ್ಟು 699 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.. ದೆಹಲಿಯಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 36 ಬೇಕಾಗಿದೆ.
ದೆಹಲಿ ವಿಧಾನಸಭೆಯ 70 ಸ್ಥಾನಗಳಿಗೆ ಮತದಾನ ಮುಕ್ತಾಯಗೊಂಡಿದೆ.. ಸತತ 10 ವರ್ಷಗಳಿಂದ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷ ಹ್ಯಾಟ್ರಿಕ್ ಕನಸಿನಲ್ಲಿದ್ದರೆ, 27 ವರ್ಷಗಳ ಬಳಿಕ ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿ ಬಿಜೆಪಿ ಹಾಗೂ 10 ವರ್ಷಗಳ ಬಳಿಕ ಅಧಿಕಾರದ ಆಸೆಯಲ್ಲಿ ಕಾಂಗ್ರೆಸ್ ಇದೆ.. 70 ಸ್ಥಾನಗಳಿಗೆ ಒಟ್ಟು 699 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.. ದೆಹಲಿಯಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 36 ಬೇಕಾಗಿದೆ.. ದೆಹಲಿ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಚುನಾಣೋತ್ತರ ಸಮೀಕ್ಷೆಗಳು ಪ್ರಕಟವಾಗಲಿವೆ.. ದೆಹಲಿಯ ಅಧಿಕಾರದ ಮುಂದಿನ ಚುಕ್ಕಾಣಿ ಯಾರ ಕೈಗೆ ಸಿಗಲಿದೆ ಎಂಬುದರ ಸುಳಿವು ದೊರೆಯಲಿದೆ.. ಯಾವ ಪಕ್ಷವು ಎಷ್ಟಮಟ್ಟಿನ ಪೈಪೋಟಿ ಒಡ್ಡಿದೆ ಎಂಬುದು ಫೆಬ್ರವರಿ 8ರಂದು ಹೊರಬೀಳುವ ಫಲಿತಾಂಶದಲ್ಲಿ ಎಲ್ಲವೂ ಗೊತ್ತಾಗಲಿದೆ.. 70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಆಮ್ ಆದ್ಮಿ ಪಕ್ಷ ಸತತವಾಗಿ 2 ಬಾರಿ ಗೆದ್ದು ಅಧಿಕಾರದಲ್ಲಿದೆ.. 2015ರಲ್ಲಿ 67 ಕ್ಷೇತ್ರವನ್ನು ಗೆದ್ದಿದ್ದರೆ, 2020ರ ಚುನಾವಣೆಯಲ್ಲಿ 63 ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಿತ್ತು