ವೈರಲ್

ಡ್ರಗ್ಸ್​ ಕೇಸ್ ​ಲ್ಲಿ​ ದಂಪತಿ ಅರೆಸ್ಟ್​ : ಒಂದು ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ವಶ

ಆರೋಪಿ ಮೈಕೆಲ್ 2018ರಲ್ಲಿ ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದು, ಕೆ.ಆರ್. ಪುರಂನಲ್ಲಿ ಬಾಡಿಗೆ ಮನೆ ಮಾಡಿಕೊಂಡು ಇದ್ದನು. ಇಲ್ಲಿಯೇ, ಪಕ್ಕದ ಮನೆಯಲ್ಲಿ ವಾಸವಿದ್ದ ಸಹನಾ ಎಂಬುವರನ್ನು ಪ್ರೀತಿಸಿ ಮದುವೆ ಆಗಿದ್ದಾನೆ. ನಂತರ ಪತ್ನಿಯನ್ನು ಸೇರಿಸಿಕೊಂಡು ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದನು.

ಬೆಂಗಳೂರು : ನಗರದಲ್ಲಿ ಡ್ರಗ್ಸ್ ಹಾವಳಿ ಮಿತಿ ಮೀರಿದ್ದು, ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯರಪ್ಪನಹಳ್ಳಿ ಗ್ರಾಮದಲ್ಲಿ ಬಂಧಿಸಿದ್ದಾರೆ. ಆಫ್ರಿಕಾ ಮೂಲದ ಮೈಕಲ್ ಓಕೆಲಿ, ಮತ್ತು ಬೆಂಗಳೂರಿನ ಸಹನಾ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ  ಪಡೆಯಲಾಗಿದೆ ಎಂದು ತಿಳಿದುಬಂದಿಂದೆ.

ಹೌದು, ಆರೋಪಿ ಮೈಕೆಲ್ 2018ರಲ್ಲಿ ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದು, ಕೆ.ಆರ್. ಪುರಂನಲ್ಲಿ ಬಾಡಿಗೆ ಮನೆ ಮಾಡಿಕೊಂಡು ಇದ್ದನು. ಇಲ್ಲಿಯೇ, ಪಕ್ಕದ ಮನೆಯಲ್ಲಿ ವಾಸವಿದ್ದ ಸಹನಾ ಎಂಬುವರನ್ನು ಪ್ರೀತಿಸಿ ಮದುವೆ ಆಗಿದ್ದಾನೆ. ನಂತರ ಪತ್ನಿಯನ್ನು ಸೇರಿಸಿಕೊಂಡು ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದನು. ನಂತರ, ಮೈಕಲ್ ಮತ್ತು ಸಹನಾ ದಂಪತಿ ಕೆ.ಆರ್. ಪುರಂನಿಂದ ಯರಪ್ಪನಹಳ್ಳಿ ಗ್ರಾಮಕ್ಕೆ ಶಿಫ್ಟ್ ಆಗಿದ್ದರು. ಇಲ್ಲಿಂದಲೇ ಡ್ರಗ್ಸ್ ಸರಬರಾಜು ಮಾಡಲು ಆರಂಭಿಸಿದರು ಎಂದು ತಿಳಿದುಬಂದಿಂದೆ.