ಚನ್ನಪಟ್ಟಣ ಉಪಚುನಾವಣೆ ಮತದಾನ ನಡೆದ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರಿಗೆ, ಸಿ.ಪಿ.ಯೋಗೇಶ್ವರ್ ಧನ್ಯವಾದ ತಿಳಿಸಿದ್ದಾರೆ. ಇದೇ ವೇಳೆ ಸೋಲಿನ ಭಯ ಕೂಡ ವ್ಯಕ್ತಪಡಿಸಿದ್ರಾ ಎಂಬ ಅನುಮಾನ ಮೂಡುತ್ತಿದೆ. ಯಾಕೆ ಅಂದ್ರೆ ನನ್ನ ರಾಜಕೀಯ ಜೀವನದ ದೊಡ್ಡ ಚುನಾವಣೆ ಇದು. ಇದು ಇಷ್ಟೊಂದು ತೀವ್ರತೆ ಪಡೆಯುತ್ತೆ ಅಂದುಕೊಂಡಿರಲಿಲ್ಲ. ಎರಡೂ ಕಡೆಯೂ ಸಮಬಲದ ಹೋರಾಟ ಇದೆ. ಜಮೀರ್ ಸ್ಟೇಟ್ ಮೆಂಟ್ ಒಂದಷ್ಟು ಲಾಭ ಆದ್ರೆ ಒಂದಷ್ಟು ನಷ್ಟ ಆಗಿದೆ ಎಂದು, ಸಿ.ಪಿ.ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ.
ಇದರ ಜೊತೆಗೆ ಮುಸ್ಲಿಂ ಮತಗಳ ಕ್ರೋಢೀಕರಣ ಒಂದುಕಡೆಯಾದ್ರೆ ಇನ್ನೊಂದು ಸಮುದಾಯಕ್ಕೆ ಹೊಡೆತ ಬಿದ್ದಿದೆ. ಅದರಿಂದ ಸ್ವಲ್ಪ ಆಘಾತವಾಗಿದೆ ಎಂದು ಹೇಳಿದರು. ಜೊತೆಗೆ ಯಾರೇ ಗೆದ್ದರೂ ಕೂದಲೆಳೆ ಅಂತರದಲ್ಲಿ ಗೆಲ್ಲುತ್ತೇವೆ. ಇದರಲ್ಲಿ ನಿರಾಶದಾಯಕ ವಿಷಯ ಏನಿಲ್ಲ ಎಂದು ಹೇಳಿದ್ದಾರೆ.