ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿ ಇಂದಿಗೆ ಒಂದು ವರ್ಷ. ಮಂದಿರ ನಿರ್ಮಾಣಕ್ಕೆ ಶ್ರಮಿಸಿದ, ಯೋಗದಾನ ನೀಡಿದ ಎಲ್ಲರನ್ನೂ ಸ್ಮರಿಸ್ತೇವೆ ಎಂದು ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಸಿ.ಟಿ ರವಿ, ಮೋದಿಯವರ ಯೋಗದಾನವೂ ದೊಡ್ಡದಿದೆ, ಅವರಿಗೂ ಅಭಿನಂದನೆ ಸಲ್ಲಿಸ್ತೇವೆ ಎಂದಿದ್ದಾರೆ
ಇನ್ನೂ, ಪ್ರಿಯಾಂಕಾ ಗಾಂಧಿಯನ್ನು ರಾಣಿ ಚೆನ್ನಮ್ಮಗೆ ಹೋಲಿಸಿದ ವಿಚಾರಕ್ಕೆ ಸಿ.ಟಿ ರವಿ ಲೇವಡಿ ಮಾಡಿದ್ದಾರೆ. ಹೊಗಳುವ ಭರದಲ್ಲಿ ಮಾನಸಿಕ ಗುಲಾಮಗಿರಿ ತೋರಿಸಿದ್ದಾರೆ. ಇದು ಭಟ್ಟಂಗಿತನದ ಹೇಳಿಕೆ. ಈ ಮೂಲಕ ಚೆನ್ನಮ್ಮಗೆ ಅಪಮಾನ ಮಾಡಲಾಗಿದೆ. ರಾಷ್ಟ್ರೀಯ ವ್ಯಕ್ತಿತ್ವಕ್ಕೂ ಈ ಮೂಲಕ ಅವಮಾನ ಮಾಡಲಾಗಿದೆ. ನಾಡಿನ ಜನತೆಗೆ ಮಲ್ಲಿಕಾರ್ಜುನ ಖರ್ಗೆ ಕ್ಷಮೆ ಕೋರಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.