ಆನೇಕಲ್ : ಬೆಳ್ಳಂಬೆಳಗ್ಗೆ ಮನೆಯಲ್ಲಿದ್ದ ಸಿಲಿಂಡರ್ ಬ್ಲಾಸ್ಟ್ ಆಗಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಕಾಚನಾಯಕನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಬೆಳಿಗ್ಗೆ ಎದ್ದು ಮನೆಯಲ್ಲಿ ಲೈಟ್ ಹಾಕುತ್ತಿದ್ದಂತೆ ಸಿಲಿಂಡರ್ ಸ್ಪೋಟಗೊಂಡಿದೆ. ಸ್ಪೋಟದ ತೀವ್ರತೆಗೆ ಮನೆಯ ಕಿಟಕಿ, ಬಾಗಿಲುಗಳು ಫಿಸ್ ಫಿಸ್ ಆಗಿದ್ದು, ಮನೆಯಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿದೆ. ಕೂಡಲೇ ಗಾಯಾಳುಗಳನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಸೂರ್ಯಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಅಗ್ನಿಶಾಮಕ ಠಾಣಾ ತಂಡ ಭೇಟಿ ನೀಡಿದೆ.